Tuesday, August 23, 2022

d devaraj arasu ganga kalyan yojana 2022- devaraj arasu loan application 2022 - devaraj arasu education loan 2022 last date 31/08/2022 -devaraj arasu loan 2022 application form in kannada - ದೇವರಾಜ ಅರಸು ಅಭಿವೃದ್ಧಿ ನಿಗಮ 2022 - ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ - ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ 2022 -ದೇವರಾಜ ಅರಸು ಜೀವನ ಚರಿತ್ರೆ ಮತ್ತು ಸಾಧನೆ

  ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 

devaraj arasu loan application 2022


ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ 

              ಸಾಲ ಯೋಜನೆ 2022

1) ಗಂಗಾಕಲ್ಯಾಣ ನೀರಾವರಿ ಯೋಜನೆ

2) ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕುಸುಬುದಾರರಿಗೆ ಸಾಲ ಮತ್ತು ಸಹಾಯಧನ

3) ಕಿರುಸಾಲ ಯೋಜನೆ

4) ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

5)ಚೈತನ್ಯ ಸಹಾಯಧನ ಯೋಜನೆ 


1) ಗಂಗಾಕಲ್ಯಾಣ ನೀರಾವರಿ ಯೋಜನೆ


ಉದ್ದೇಶ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.

ಅರ್ಹತೆ: ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದವರಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. (ಒಕ್ಕಲಿಗ ಮತ್ತು ಅದರ ಉಪ ಜಾತಿಗಳು, ವೀರ ಶೈವ ಲಿಂಗಾಯುತ ಅದರ ಉಪ ಜಾತಿಗಳು, ಮರಾಠ ಮತ್ತು ಅದರ ಉಪ ಜಾತಿಗಳು, ಕಾಡುಗೊಲ್ಲ, ಹಟ್ಟಿಗೊಲ್ಲ ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳು, ಸವಿತಾ ಮತ್ತು ಅದರ ಉಪ ಜಾತಿಗಳು ಮಡಿವಾಳ ಮತ್ತು ಅದರ ಉಪ ಜಾತಿ ಈ ಜಾತಿಯನ್ನು ಹೊರತುಪಡಿಸಿ) 

ಸೌಲಭ್ಯ: 

ವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು. 

ಘಟಕವೆಚ್ಚ: ರೂ.2.50ಲಕ್ಷಗಳು. ರೂ.2.00ಲಕ್ಷಗಳ ಸಹಾಯಧನ(ಸಬ್ಸಿಡಿ) ಹಾಗೂ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ರೂ.50,000/-ಗಳ ಸಾಲ.  ರೂ.2.00ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚ, ಪಂಪ್‍ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.1.50ಲಕ್ಷಗಳ ವೆಚ್ಚ ಭರಿಸಲಾಗುವುದು. 

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್. ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ಧೀಕರಣ ವೆಚ್ಚವಾಗಿ. ಪ್ರತಿ ಕೊಳವೆ ಬಾವಿಗಳಿಗೆ ರೂ.50000/-ಗಳಂತೆ ಪಾವತಿಸಲಾಗುವುದು. 

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.00ಲಕ್ಷಗಳು, ಇದರಲ್ಲಿ ರೂ.3.50ಲಕ್ಷಗಳ ಸಹಾಯಧನ ಹಾಗೂ ರೂ.50000/-ಗಳ ಸಾಲವಾಗಿರುತ್ತದೆ.

ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ: ಪ್ರವರ್ಗ-1, 2ಎ, 3ಎ & 3ಬಿಗೆ ಸೇರಿದ ಕನಿಷ್ಠ 3 ಜನ ಸಣ್ಣ ಮತ್ತು ಅತಿಸಣ್ಣ ರೈತರು ಹೊಂದಿರುವ 8 ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕವಾಗಿ ನೀರಾವರಿ ಸೌಲಭ್ಯ. 

ಘಟಕ ವೆಚ್ಚ: 8-15 ಎಕರೆ ಜಮೀನಿಗೆ ರೂ.4.00ಲಕ್ಷಗಳ ವೆಚ್ಚದಲ್ಲಿ 2 ಕೊಳವೆಬಾವಿ ಹಾಗೂ 15 ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗದಿತ ಘಟಕವೆಚ್ಚ ರೂ.6.00ಲಕ್ಷಗಳ ವೆಚ್ಚದಲ್ಲಿ 3 ಕೊಳವೆಬಾವಿಗಳನ್ನು ಕೊರೆಯಿಸಿ ಪಂಪ್‍ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದು ಪೂರ್ಣ ಅನುದಾನವಾಗಿರುತ್ತದೆ.

ತೆರೆದಬಾವಿ: ವೈಯುಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಸಾಮೂಹಿಕ ಏತ ನೀರಾವರಿ ಯೋಜನೆ: ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲಸಂಪನ್ಮೂಲಗಳಾದ ನದಿ, ಕೆರೆ, ಹಳ್ಳ ಇವುಗಳಿಗೆ ಮೋಟಾರ್ ಅಳವಡಿಸಿ ಪೈಪ್‍ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು. 

ಘಟಕವೆಚ್ಚ: ಸಾಮೂಹಿಕ ನೀರಾವರಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಸೌಲಭ್ಯ ಒದಗಿಸುವುದು. 

            ಈ ಕಾರ್ಯಕ್ರಮಕ್ಕೆ ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿದ ಆರ್ಥಿಕ ಗುರಿಯನ್ವಯ ಮೀಸಲಾತಿ ಅನುಪಾತ  ಪ್ರವರ್ಗ-1 ಮತ್ತು 2ಎಗೆ 70% ಪ್ರವರ್ಗ-3ಎ ಮತ್ತು 3ಬಿಗೆ 30%ರಂತೆ ವೈಯಕ್ತಿಕ/ಸಾಮೂಹಿಕ ನೀರಾವರಿ ಘಟಕಗಳನ್ನು ಆಯ್ಕೆ ಮಾಡಿ ಸೌಲಭ್ಯ ಒದಗಿಸಬೇಕು.

ಮರುಪಾವತಿ ಅವಧಿ: ಸಾಲದ ಮರುಪಾವತಿ ಅವಧಿ 3 ವರ್ಷಗಳು. 


devaraj arasu loan application 2022

(ಗಮನಿಸಿ: ನೀವು ಅರ್ಜಿ ಸಲ್ಲಿಸಲು ಮುಂದುವರಿಯುವ ಮೊದಲು ದಯವಿಟ್ಟು ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು (ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾಗಿದೆ) ಸಿದ್ಧವಾಗಿಡಿ.)

(  ಅಗತ್ಯವಾದ ದಾಖಲೆಗಳು )
1) Aadhar card  
2) Voter ID
3) Ration card 
4) pani  
5) cast and income 
6) small framer  certificate 
7) fruit ID 
8) Phots ( pass port size) 

online applying  

SEVA SINDHU 
 
last date  : 15-09-2022 

No comments:

Post a Comment